ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ಇಲ್ಲಿನ ಕಥೊಲಿಕ್ ಸಭಾ ವತಿಯಿಂದ ಮೇರಿ ಮಾತೆ ಸ್ವರ್ಗಾರೋಹಣದ ಹಬ್ಬದಂದು ಕುಂದಾಪುರ ಇಗರ್ಜಿಯ ಸಹಾಯಕ ಧರ್ಮಗುರು ಜೆರಾಲ್ಡ್ ಸಂದೀಪ್ ಡಿಮೆಲ್ಲೊ ಮತ್ತು ಧರ್ಮಗುರು ವಂ. ಪ್ರವೀಣ್ ಅಮ್ರತ್ ಮಾರ್ಟಿಸ್ ಪವಿತ್ರ ಬಲಿದಾನ ಅರ್ಪಿಸಿದರು.
ಚರ್ಚ್ ಪ್ರಧಾನ ಧರ್ಮಗುರು ವಂ.ಅನಿಲ್ ಡಿಸೋಜಾರ ಅಧ್ಯಕ್ಷತೆ ವಹಿಸಿ, ಸ್ನಾನಕೋತ್ತರ ಪದವಿಗಳಲ್ಲಿ ಸಾಧನೆ ಮಾಡಿದ ಹಾಗೂ ಧರ್ಮಗುರು ಜೆರಾಲ್ಡ್ ಸಂದೀಪ್ ಡಿಮೆಲ್ಲೊ ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಮತ್ತು ಪದವಿಯಲ್ಲಿ ಸಾಧನೆ ಮಾಡಿದವರನ್ನು ಪುರಸ್ಕರಿಸಿದರು. ಕುಂದಾಪುರ ಸಂತ ಮೇರಿಸ್ ಪಿ.ಯು.ಕಾಲೇಜ್ ಧರ್ಮಗುರು ವಂ.ಪ್ರವೀಣ್ ಅಮ್ರತ್ ಮಾರ್ಟಿಸ್, ಕಥೊಲಿಕ್ ಸಭೆಯ ನಿರ್ಗಮನ ಅಧ್ಯಕ್ಷ ವಿಲ್ಸನ್ ಆಲ್ಮೇಡಾ, ಪಾಲನ ಮಂಡಳಿ ಕಾರ್ಯದರ್ಶಿ ಫೆಲ್ಸಿಯಾನ್ ಡಿಸೋಜಾಉಪಸ್ಥಿತರಿದ್ದರು. ಘಟಕದ ನಿಯೋಜಿತ ಅಧ್ಯಕ್ಷೆ ಶೈಲಾ ಆಲ್ಮೇಡಾ ಸ್ವಾಗತಿಸಿದರು. ವಿನಯಾ ಡಿಕೋಸ್ತಾ ನಿರುಪಿಸಿದರು. ಕಾರ್ಯದರ್ಶಿ ಜೂಲಿಯೆಟ್ ಪಾಯ್ಸ್ ವಂದಿಸಿದರು.