ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಮ್ಮಾಡಿ ವೃತ್ತದಲ್ಲಿ ಬೈಂದೂರು ಬಿಜೆಪಿ ಯುವಮೋರ್ಚಾ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು. ಪಿ.ಎಫ್.ಐ ಹಾಗೂ ಕೆ.ಎಫ್.ಡಿ ಸಂಘಟನೆಯನ್ನು ನಿಷೇಧಿಸಬೇಕು, ಭ್ರ್ರಷ್ಟ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿರುವುದಲ್ಲದೇ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಅವರ ವಿರುದ್ಧ ಎ.ಸಿ.ಬಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿದರು.
ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶರತ್ ಕುಮಾರ ಶೆಟ್ಟಿ ಉಪ್ಪುಂದ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಅಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸುದೇಶ ಕುಮಾರ ಶೆಟ್ಟಿ ಗುಲ್ವಾಡಿ, ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿ ಗಾಣಿಗ ಕೆಂಚನೂರು, ಯುವ ಮೋರ್ಚಾ ಪಧಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.