ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಪ್ಪುಂದ: ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಪಂದ್ಯಾಟದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಪಾಲ್ಗೊಂಡ ಉಪ್ಪುಂದ ವಿಶ್ವನಾಥ ದೇವಾಡಿಗ ಕಂಚಿನ ಪದಕ ಪಡೆದು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಕರಾಟೆಯನ್ನು ಜೀವನದ ಹವ್ಯಾಸವಾಗಿಟ್ಟುಕೊಂಡು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಇವರು ಉಪ್ಪುಂದ ದೊಡ್ಡಹಾಡಿಮನೆ ಅಣ್ಣಪ್ಪ ದೇವಾಡಿಗ ಮತ್ತು ಕಾವೇರಿ ದೇವಾಡಿಗರ ಪುತ್ರ.