ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನೃತ್ಯ, ನಾಟಕ, ಸಂಗೀತ, ಯಕ್ಷಗಾನ, ಚಿತ್ರಕಲೆ ಹಾಗೂ ಯಕ್ಷಿಣಿ ಕಲಾ ತರಬೇತಿಗೆ ಮೀಸಲಾಗಿರುವ ಸಂಸ್ಥೆ ಸುರಭಿ ಬೈಂದೂರು ಇದರ ವಿದ್ಯಾರ್ಥಿಗಳು ಕರ್ನಾಟಕ ಸರಕಾರದ ಪ್ರೌಢ ಶಿಕ್ಷಣ ಮಂಡಳಿಯಿಂದ ಪ್ರಸ್ತುತ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಪರೀಕ್ಷೆಯಲ್ಲಿ ಇಬ್ಬರು ವಿಶಿಷ್ಟ ದರ್ಜೆಯಲ್ಲಿ ಹಾಗೂ ಇತರರು ಪ್ರಥಮ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದು ಸಂಸ್ಥೆಯು ಶೇ. 100 ಫಲಿತಾಂಶ ಪಡಿದಿದೆ.
ಕರ್ನಾಟಕ ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯೊಂದಿಗೆ ಉತ್ತೀರ್ಣರಾಗಿದ್ದು ಸಂಸ್ಥೆಯು ಶೇ.೮೦ ಫಲಿತಾಂಶ ಪಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.