Kundapra.com ಕುಂದಾಪ್ರ ಡಾಟ್ ಕಾಂ

ಕಿರಿಮಂಜೇಶ್ವರ: ಬಸ್ – ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಯುವಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿಗೆ ಸಮೀಪದ ಕಿರಿಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ನಡೆದ ಬಸ್ ಹಾಗೂ ಬೈಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮರವಂತೆ ಗಾಡಿಮನೆ ವೆಂಕಪ್ಪ ಖಾರ್ವಿಯವರ ಪುತ್ರ ಶ್ರೀಕಾಂತ ಖಾರ್ವಿ(24) ಮೃತ ದುರ್ದೈವಿ ಯುವಕ.

ಬೈಕ್‌ಗೆ ಸರ್ಕಾರಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದಿದ್ದರಿಂದ, ಆಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಶ್ರೀಕಾಂತ ಖಾರ್ವಿಯನ್ನು ಸ್ಥಳೀಯರು ಆಪತ್ಭಾಂಧವ ಆಂಬುಲೆನ್ಸ್ ಆಸ್ಪತ್ರೆಗೆ ಸಾಗಿಸಲು ಪ್ರಯತ್ನ ನಡೆಸಿದರಾದರೂ ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Exit mobile version