ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾರ್ವಜನಿಕ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಹಾಜಿ.ಕೆ.ಮೊಹಿದ್ದೀನ್ ಬ್ಯಾರಿ ಪಿಯು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಕೊಂಡಿರುತ್ತಾರೆ. (ಸತತ ಮೂರು ವರ್ಷ ಪ್ರಥಮ ಸ್ಥಾನ) ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಮಾಸ್ಟರ್ ಮೆಹಮ್ಮದ್, ಪ್ರಾಂಶುಪಾಲರಾದ ಡಾ.ಶಮೀರ್, ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಿತೇಶ್ ಶೆಟ್ಟಿ. ತರಬೇತುದಾರ ಇಲಿಯಾಸ್ ನಾವುಂದ ಹಾಗೂ ಕುಮಾರ ಉಪಸ್ಥಿತರಿದ್ದರು.