Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ನುಡಿನಮನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಮುದಾಯ ಕುಂದಾಪುರ ಸಹಯೋಗದೊಂದಿಗೆ ಇತ್ತಿಚಿಗೆ ದುಷ್ಕರ್ಮಿಗಳಿಂದ ಹತ್ಯೆಗೊಳದಾದ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಸಮುದಾಯ ಕುಂದಾಪುರ ಅಧ್ಯಕ್ಷ ಉದಯ ಗಾಂವ್ಕರ್, ಸಾಹಿತಿ ಎ.ಎಸ್.ಎನ್ ಹೆಬ್ಬಾರ್, ಕಾರ್ಟೂನಿಷ್ಠ್ ಸತೀಶ್ ಆಚಾರ್ಯ, ಪತ್ರಕರ್ತ ರಾಮಕೃಷ್ಣ ಹೇರ್ಳೆ, ಶಿಕ್ಷಕಿ ಅಭಿಲಾಷಾ ಮೊದಲಾದವರು ಕ್ಯಾಂಡಲ್ ಬೆಳಗಿ ನುಡಿನಮನ ಸಲ್ಲಿಸಿದರು. ಕುಂದಾಪುರದ ಸಾಹಿತಿಗಳು, ಪತ್ರಕರ್ತರು, ವಿಚಾರವಾದಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Exit mobile version