ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಆಶ್ರಯದಲ್ಲಿ ನಾವುಂದದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕಿಯರ ಕಬಡ್ಡಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ ಪ್ರಶಸ್ತಿ ಸ್ವೀಕರಿಸಿದರು.