Kundapra.com ಕುಂದಾಪ್ರ ಡಾಟ್ ಕಾಂ

ನೆಟ್‌ಬಾಲ್ ಪಂದ್ಯ: ಕೊಲ್ಲೂರು ಪ.ಪೂ ಕಾಲೇಜು ಬಾಲಕ, ಬಾಲಕಿಯರ ತಂಡ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಕೊಲ್ಲೂರು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಹಾಗೂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅರುಣ್ ಪ್ರಕಾಶ್ ಶೆಟ್ಟಿ, ನಾಗರಾಜ್ ಅಡಿಗ ಮತ್ತು ಮೊದಲಾದವರು ಉಪಸ್ಥಿರಿದ್ದರು.

 

Exit mobile version