ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ವಿಭಾಗದ ಟೆನ್ನಿ ಕಾಯ್ಟ್ ಕ್ರೀಡಾ ಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಪಡೆದ ಟ್ರೋಫಿಯೊಂದಿಗೆ. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಆಂಗ್ಲ ಬಾಷಾ ಉಪನ್ಯಾಸಕ ಥಾಮಸ್ ಕೆ.ಪಿ ಉಪಸ್ಥಿತರಿದ್ದಾರೆ.ಗಣೇಶ್ ಖಾರ್ವಿ, ಅಭಿಷೇಕ್ ಮತ್ತು ರೋಶನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿಜೇತರನ್ನು ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.