ಮೂಡುಬಿದಿರೆ : ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸತತ 13ನೇ ಬಾರಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್‍ನ ದೈಹಿಕ ಶಿಕ್ಷಣ ಕಾಲೇಜು ಎರಡು ವಿಭಾಗಗಳಲ್ಲೂ ದ್ವಿತೀಯ ಸ್ಥಾನಿಯಾಗಿದೆ.
ಒಟ್ಟು 16 ವಿಭಾಗಗಳಲ್ಲಿ ನಡೆದಿರುವ ಸ್ಪರ್ಧೆಯಲ್ಲಿ ಪುರುಷರ 7 ಹಾಗೂ ಮಹಿಳೆಯರ 8 ವಿಭಾಗಗಳಲ್ಲಿ ಒಟ್ಟು 15 ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆಯಿತು. ಆಳ್ವಾಸ್ ಕಾಲೇಜಿನ ಬಸವರಾಜ್ ಹಾಗೂ ಲಕ್ಷ್ಮೀ ರೇಡೇಕರ್ ಅತ್ಯುತ್ತಮ ಕುಸ್ತಿಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.