ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಾಂಧಿ ಜಯಂತಿ ಪ್ರಯುಕ್ತ ಮಾದಕ ವಸ್ತುಗಳ ಸೇವನೆಯಿಂದ ಆಗುತ್ತಿರುವ ದುಷ್ಪರಿಣಾಮಗಳು ಹಾಗೂ ಅವುಗಳನ್ನು ನಿಯಂತ್ರಿಸುವ ಕುರಿತಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಈ ಹಿನ್ನಲೆಯಲ್ಲಿ ಪ್ರಶಸ್ತಿ ಪುರಸ್ಕೃತ ಕಿರು ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಧೂಮಪಾನ, ಮಧ್ಯಪಾನ ಮತ್ತು ಡ್ರಗ್ಸ್ ಕುರಿತು ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳು ಕಿರುನಾಟಕವನ್ನು ಪ್ರದರ್ಶಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್ ಮತ್ತು ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕರಾದ ಜಯಶೀಲ್ ಕುಮಾರ್, ರಕ್ಷಿತ್ ರಾವ್ ಗುಜ್ಜಾಡಿ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಮಹೇಶ್ ಬಾಬು ಕಾರ್ಯಕ್ರಮವನ್ನು ಸಂಯೋಜಿಸಿದರು.