Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ ಶಾಲೆಗೆ ಸ್ಮಾರ್ಟ್‌ಕ್ಲಾಸ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸತ್ಯನಾರಾಯಣ ಹೊಳೆಬಾಗ್ಲು ಕೊಡುಗೆಯಾಗಿತ್ತ ಸುಮಾರು ರೂ. ೧ ಲಕ್ಷ ಮೌಲ್ಯದ ಸ್ಮಾರ್ಟ್‌ಕ್ಲಾಸ್ ತಂತ್ರಜ್ಞಾನ ವ್ಯವಸ್ಥೆಯನ್ನು ಅವರು ಮಂಗಳವಾರ ಉದ್ಘಾಟಿಸಿದರು.ಈ ಸಂದರ್ಭ ಮಾತನಾಡಿದ ಅವರು ಶಾಲೆಯ ಹಳೆ ವಿದ್ಯಾರ್ಥಿಗಳು ಕಲಿತ ಶಾಲೆಯ ಋಣ ತೀರಿಸಬೇಕಾದರೆ ಅಲ್ಲಿನ ಅಗತ್ಯಗಳನ್ನು ಈಡೇರಿಸುವ ಮೂಲಕ ಶಾಲೆ ಗುಣಮಟ್ಟದ ಶಿಕ್ಷಣ ನೀಡಲು ಕಾರಣರಾಗಬೇಕು ಎಂದರು.

ಶಿಕ್ಷಣ ಇಲಾಖೆಯ ಪರವಾಗಿ ಕೊಡುಗೆಯನ್ನು ಸ್ವೀಕರಿಸಿದ ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ ಮಾತನಾಡಿ ಮರವಂತೆ ಶಾಲೆಯ ಹಳೆವಿದ್ಯಾರ್ಥಿ ಸಂಘ ಸಕ್ರಿಯವಾಗಿದ್ದು ಕಳೆದ ವರ್ಷದಿಂದ ಬಸ್ ವ್ಯವಸ್ಥೆ ಕಲ್ಪಿಸಿದೆ. ಹಳೆ ವಿದ್ಯಾರ್ಥಿಯಾಗಿರುವ ಸತ್ಯನಾರಾಯಣ ಈಗ ನೀಡಿರುವ ಸ್ಮಾರ್ಟ್‌ಕ್ಲಾಸ್ ಮೂಲಕ ಬೋಧನೆ ಮತ್ತು ಕಲಿಕೆಯನ್ನು ಇನ್ನಷ್ಟು ಪರಿಣಾಮಕಾರಿ ಮಾಡಬಹುದಾಗಿದೆ. ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಒಯ್ಯಲು ಕೆಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನುನೆರ ಕಾರ್ಯಗತಗೊಳಿಸಲು ಹಿಂದೆ ಇಲ್ಲಿ ಕಲಿತು ಉತ್ತಮ ಸ್ಥಿತಿಯಲ್ಲಿರುವ ಹಳೆ ವಿದ್ಯಾರ್ಥಿಗಳು ನೆರವು ನೀಡಬೇಕು ಎಂದು ಹೇಳಿ ದಾನಿಗೆ ಕೃತಜ್ಞತೆ ಸಲ್ಲಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಬಳೆಗಾರ್, ಕಾರ್ಯದರ್ಶಿ ರವಿ ಮಡಿವಾಳ, ಗೌರವಾಧ್ಯಕ್ಷ ಎಸ್. ಜನಾರ್ದನ, ಪದಾಧಿಕಾರಿಗಳು ಮತ್ತು ಸದಸ್ಯರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ ಪೂಜಾರಿ, ಮಾಜಿ ಅಧ್ಯಕ್ಷ ಸೋಮಯ್ಯ ಬಿಲ್ಲವ, ಸದಸ್ಯರು, ಹೊಳೆಬಾಗ್ಲು ಕುಟುಂಬದ ಹಿರಿಯರಾದ ರಾಮಕೃಷ್ಣ ಹೊಳೆಬಾಗ್ಲು ಮತ್ತು ಇತರರು, ಶಿಕ್ಷಕರು ಉಪಸ್ಥಿತರಿದ್ದರು.

Exit mobile version