Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿಖರ ಸಂಚಿಕೆಯಲ್ಲಿ ಸಂಘಟಿತ ಪ್ರಯತ್ನವಿದೆ. ಸಂಚಿಕೆಯಲ್ಲಿ ವಿದ್ಯಾರ್ಥಿಗಳ ಒಳನೋಟ ವ್ಯಕ್ತವಾಗಿದೆ. ಸಾಹಿತ್ಯದ ಕುರಿತು ವಿದ್ಯಾರ್ಥಿಗಳು ತಮ್ಮ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ ಪ್ರಜೆಯಾಗಿ ಗುರುತಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಹೊಸ ದಿಗಂತ ಕನ್ನಡ ದಿನಪತ್ರಿಕೆ ಮಂಗಳೂರು ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ಎಸ್. ಪ್ರಕಾಶ ಹೇಳಿದರು.

ಅವರು ೨೦೧೬-೧೭ನೇ ಶೈಕ್ಷಣಿಕ ಸಾಲಿನ ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರವನ್ನು ಅನಾವರಣಗೊಳಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿ ಅತ್ಯಂತ ಶ್ರೀಮಂತವಾದುದು. ಭಾರತೀಯ ಮಹಿಳೆಯರಿಗೆ ವಿಶ್ವದಾದ್ಯಂತ ಗೌರವ ಸ್ಥಾನಮಾನವಿದೆ. ವಿದ್ಯಾರ್ಥಿಗಳು ಸಾಂಸ್ಕೃತಿಯ ಪರಂಪರೆಯನ್ನು ಎತ್ತಿ ಹಿಡಿಯುವುದರ ಜೊತೆಗೆ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಿ ಎಂದು ಮುಖ್ಯ ಅತಿಥಿಗಳಾದ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ ಹೇಳಿದರು.

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀ ಸೀತರಾಮ ನಕ್ಕತ್ತಾಯ, ಗವರ್ನಿಂಗ್ ಕೌನ್ಸಿಲ್ ಸದಸ್ಯ ಶ್ರೀ ಅನಿಲ್ ಚಾತ್ರ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್ ಆಶಯ ನುಡಿಗಳನ್ನಾಡಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಸ್ಪೂರ್ತಿ ಎಸ್. ಫೆರ್ನಾಂಡಿಸ್ ಸ್ವಾಗತಿಸಿದರು. ವಾಣಿಜ್ಯ ಉಪನ್ಯಾಸಕರಾದ ವೀಣಾ ಭಟ್, ಪ್ರಥ್ವಿಶ್ರೀ ಜಿ. ಶೆಟ್ಟಿ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ವಿದ್ಯಾರ್ಥಿ ಸಂಪಾದಕ ಮಂಡಳಿಯ ಸದಸ್ಯರಾದ ರಕ್ಷಿತ್, ಸುನಿಲ್, ನಸೀಮಾ, ಪ್ರಗತಿ ಸಂಚಿಕೆ ಕುರಿತು ಅನಿಸಿಕೆ ಹಂಚಿಕೊಂಡರು. ವಾಣಿಜ್ಯ ಉಪನ್ಯಾಸಕಿ ಕು. ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು.

 

Exit mobile version