Kundapra.com ಕುಂದಾಪ್ರ ಡಾಟ್ ಕಾಂ

ಎಳವೆಯಲ್ಲಿಯೇ ಕ್ರೀಡೆಗೆ ಉತ್ತಮ ಪ್ರೋತ್ಸಾಹದ ಅಗತ್ಯ: ಬಿ.ಎಂ.ಎಸ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳೆಯಬೇಕಾದರೆ ಅವನಿಗೆ ಎಳವೆಯಲ್ಲಿಯೇ ಕ್ರೀಡೆಗೆ ಸರಿಯಾಗಿ ಪ್ರೋತ್ಸಾಹದ ಅಗತ್ಯವಿದೆ. ಅಂತಹ ನಿರಂತರ ಪ್ರೋತ್ಸಾಹವನ್ನು ವಿದ್ಯಾರ್ಥಿಗಳಿಗೆ ನಮ್ಮ ಕುಂದಾಪುರ ಎಜುಕೇಶನ್ ಸೊಸೈಟಿ ಕಲ್ಪಿಸುತ್ತಿದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.

ಅವರು ಗಾಂಧಿ ಮೈದಾನದಲ್ಲಿ ಉ.ಜಿ.ಪಂ.ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ವಲಯ, ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಎಚ್.ಎಂ.ಎಂ ಅಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಕುಂದಾಪುರ ಇವರ ಆಶ್ರಯದಲ್ಲಿ ಸಂಪನ್ನಗೊಂಡ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭೆಯ ಉಪಾಧ್ಯಕ್ಷ ರಾಜೇಶ್ ಕಾವೇರಿ, ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷ ಕಿಶೋರ್ ಕುಮಾರ್, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ ಎಸ್, ಎಚ್.ಎಂ.ಎಂ. ಮತ್ತು ವಿ.ಕೆ.ಆರ್ ಪ್ರೌಢಶಾಲೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸದಾರಾಮ ಶೆಟ್ಟಿ , ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಭಿಷೇಕ್ ಶೆಟ್ಟಿ, ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷ ಸೂರಪ್ಪ ಹೆಗ್ಡ್ದೆ, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ಹಮ್ಮು ನಾಯಕ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸತ್ಯಾನಂದ ಸಾಲಿನ್ಸ್, ವಿ.ಕೆ.ಆರ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಆಲಿಸ್ ಡಿಸೋಜಾ’, ಎಚ್.ಎಂ.ಎಂ. ಶಾಲೆಯ ಮುಖ್ಯೋಪಾಧ್ಯಾಯ ಜಗದೀಶ್ ಆಚಾರ್ ಸಾಸ್ತಾನ, ವಿ.ಕೆ.ಆರ್ ಮತ್ತು ಎಚ್.ಎಂ.ಎಂ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ನಾಗೇಶ್ ಪ್ರಭು, ರಾಜೇಂದ್ರ ಶೆಟ್ಟಿ, ಪವಿತ್ರಾ ಸಿ ಶೆಟ್ಟಿ ಮತ್ತು ವೀರೆಂದ್ರ ನಾಯಕ್ ಉಪಸ್ಥಿತರಿದ್ದರು.

ಸಮಗ್ರ ತಂಡ ಪ್ರಶಸ್ತಿಯನ್ನು ಬಾಲಕರ ವಿಭಾಗದಲ್ಲಿ ಸ.ಪ.ಪೂ. ಕಾಲೇಜು ಹೊಸಂಗಡಿ, ಬಾಲಕಿಯರ ವಿಭಾಗದಲ್ಲಿ ಸ.ಪ್ರೌ.ಶಾಲೆ ಅಮಾಸೆಬೈಲು ಮತ್ತು ಸಮಗ್ರ ಪ್ರಶಸ್ತಿಯು ಸ.ಪ.ಪೂ.ಕಾಲೇಜು ಹೊಸಂಗಡಿಯ ಪಾಲಾಯಿತು. ಎಚ್.ಎಮ್.ಎಮ್. ಶಾಲೆಯ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿ.ಕೆ.ಆರ್ ಪ್ರೌಢಶಾಲೆಯ ಶಿಕ್ಷಕ ಜಗದೀಶ್ ಸ್ವಾಗತಿಸಿ, ರಾಜೇಂದ್ರ ಶೆಟ್ಟಿ ವಂದಿಸಿದರು.

 

Exit mobile version