Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿಯ ಮಲ್ಯರಮಠದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಕಾರ್ತಿಕ ಮಾಸದಲ್ಲಿ ಜರಗುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ವಿಜೃಂಭಣೆಯಿಂದ ಶನಿವಾರ ಜರಗಿತು.

ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ಕಲ್ಯಾಣೋತ್ಸವದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ನೆರವೇರಿತು. ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ ದಂಪತಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಯಜಮಾನಿಕೆ ವಹಿಸಿದ್ದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ದೇವಳದ ಆಡಳಿತ ಮಂಡಳಿ ಸದಸ್ಯರಾದ ವೇದಮೂರ್ತಿ ಜಿ.ವೇದವ್ಯಾಸ ಕೆ.ಆಚಾರ್ಯ, ಜಿ.ವೆಂಕಟೇಶ ನಾಯಕ್, ಜಿ.ನಾರಾಯಣ ಆಚಾರ್ಯ ಕುಟುಂಬಸ್ಥರು, ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಭಕ್ತಾದಿಗಳು ಉಪಸ್ಥಿತರಿದ್ದರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

Exit mobile version