Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಕ್ಷೇತ್ರಕ್ಕೆ ಮಂಜೂರಾದ 10ಕೋಟಿ ವಿಶೇಷ ಅನುದಾನದಲ್ಲಿ 21 ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ 10 ಕೋಟಿ ರೂ. ವಿಶೇಷ ಅನುದಾನ ಮಂಜೂರಾಗಿದ್ದು ಬೈಂದೂರು ಶಾಸಕ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ವಿವಿಧ ಗ್ರಾಮಗಳ 21 ರಸ್ತೆಗಳ ಅಭಿವೃದ್ಧಿಗೆ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು.

10 ಕೋಟಿ ರೂ. ವಿಶೇಷ ಅನುದಾನದಲ್ಲಿ ಗುದ್ದಲಿಪೂಜೆ ನಡೆಸಲಾದ ಕಾಮಗಾರಿಗಳು:

 

ವಿವಿಧೆಡೆ ಜರುಗಿದ ಕಾರ್ಯಕ್ರಮಗಳಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಮೀನುಗಾರಿಕಾ ಸಂಕಷ್ಟ ಪರಿಹಾರ ಸಮಿತಿ ಸದಸ್ಯ ಮದನ್ ಕುಮಾರ್ ಉಪ್ಪುಂದ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರವೀಣ ಶೆಟ್ಟಿ. ಸದಸ್ಯರಾದ ಹೆಚ್ ವಿಜಯ್ ಶೆಟ್ಟಿ, ಜಗದೀಶ್ ಪೂಜಾರಿ, ಜಗದೀಶ್ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ರಾಜ್ಯ ಐಟಿ ಸೆಲ್ ಸದಸ್ಯ ಮಣಿಕಂಠ ದೇವಾಡಿಗ ಹಾಗೂ ವಿವಿಧ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಇಲಾಖಾ ಸಹಾಯಕ ಕಾರ್ಯನಿರ್ವಾಹಕ ಹೇಮಂತ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Exit mobile version