ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಕಲ ದಾರ್ಮಿಕ ವಿಧಿ ವಿದಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.
ದೀಪೋತ್ಸವ ಹಾಗೂ ಸಂಕಷ್ಟಹರ ಚತುರ್ಥಿಯ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಪೂಜೆ ನೆರವೇರಿತು. ಸಾವಿರಾರು ಭಕ್ತರು ಶ್ರೀ ದೇವರ ದರ್ಶನ ಪಡೆದರು ಈ ಸಂದರ್ಭದಲ್ಲಿ ದೇವಳದ ಆಡಳಿತ ಧರ್ಮದರ್ಶಿ ಹೆಚ್. ರಾಮಚಂದ್ರ ಭಟ್, ಪ್ರದಾನ ಅರ್ಚಕ ಹೆಚ್. ಬಾಲಚಂದ್ರ ಭಟ್, ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಪ್ರಾಂಶುಪಾಲ ಶರಣ್‌ಕುಮಾರ್ ಇನ್ನಿತರರು ಉಪಸ್ಥಿತರಿದ್ದರು
ಚಿತ್ರ : ಸಮಾ ಡಿಜಿಟಲ್, ಕುಂದಾಪುರ