Kundapra.com ಕುಂದಾಪ್ರ ಡಾಟ್ ಕಾಂ

ನೂತನ ಬೆಳ್ಳಿರಥದೊಂದಿಗೆ ಉಪ್ಪುಂದ ರಾಣಿಬಲೆ ಮೀನುಗಾರರಿಂದ ಭವ್ಯ ಪುರಮೆರವಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ರಾಣಿಬಲೆ ಮೀನುಗಾರರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಬೆಳ್ಳಿರಥ ಸಮರ್ಪಿಸಲಿರುವ ನೂತನ ನೂತನ ಬೆಳ್ಳಿರಥವನ್ನು ಉಪ್ಪುಂದ ಅಂಬಾಗಿಲಿನಿಂದ ಭವ್ಯ ಪುರಮೆರವಣಿಗೆಯ ಮೂಲಕ ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಕೊಂಡೊಯ್ಯಲಾಯಿತು.

ಡಿ. 20ರ ಬುಧವಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ಉಪ್ಪುಂದ ರಾಣಿಬಲೆ ಮೀನುಗಾರ ಒಕ್ಕೂಟದಿಂದ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ನೀಡಲಾದ ಬೆಳ್ಳಿರಥವನ್ನು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಮರ್ಪಣೆ ಮಾಡಲಿದ್ದಾರೆ.

ಪುರಮೆರವಣಿಗೆಯ ವೇಳೆ ರಥಶಿಲ್ಪಿ ಬಿ. ಲಕ್ಷ್ಮೀನಾರಾಯಣ ಆಚಾರ್ಯ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಜಯರಾಮ ಶೆಟ್ಟಿ, ರಾಣಿಬಲೆ ಮೀನುಗಾರರ ಒಕ್ಕೂಟ ರಿ. ಉಪ್ಪುಂದ ಇದರ ಅಧ್ಯಕ್ಷ ವೆಂಕಟರಮಣ ಖಾರ್ವಿ, ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಸಲಹೆಗಾರರಾದ ಎಸ್. ಮದನಕುಮಾರ್, ಆಂತರಿಕ ಲೆಕ್ಕಪರಿಶೋಧಕರಾದ ಶ್ರೀಧರ ಉಪ್ಪುಂದ, ಕಾರ್ಯದರ್ಶಿ ಡಿ. ಮೋಹನ ಖಾರ್ವಿ, ಕೋಶಾಧಿಕಾರಿ ಜಿ. ಮಾಧವ ಖಾರ್ವಿ, ಜೊತೆ ಕಾರ್ಯದರ್ಶಿ ಮಂಜುನಾಥ ಜಿ. ಖಾರ್ವಿ, ನಿರ್ದೇಶಕರಾದ ಎ. ಶ್ರೀನಿವಾಸ ಖಾರ್ವಿ, ಡಿ. ಶುಕ್ರ ಖಾರ್ವಿ, ರಮೇಶ್ ಖಾರ್ವಿ, ಪದ್ಮನಾಭ ಖಾರ್ವಿ, ರಾಜರಾಮ ಖಾರ್ವಿ, ನಾಗೇಶ್ ಖಾರ್ವಿ ಹಾಗೂ ಇತತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Exit mobile version