Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ ಎಜ್ಯುಕೇಶನಲ್ ಸರ್ವೀಸ್ ಟ್ರಸ್ಟ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿದ್ಯಾರ್ಥಿಗಳ ಕಲಿಕಾ ಮಟ್ಟದಲ್ಲಿ ಇತ್ತೀಚಿನ ದಿನಗಳಲ್ಲಿ ಕೌಶಲ್ಯದ ಕೊರತೆ ಕಂಡುಬಂದಿದ್ದು, ಆಧುನಿಕತೆಗೆ ತಕ್ಕಂತೆ ಬದಲಾವಣೆಗೆ ಹೊಂದುವ ಅವಶ್ಯಕತೆಯಿದೆ. ವಿದ್ಯಾರ್ಥಿಗಳಿಗೆ ಮೌಲ್ಯಯುತ್ತ ಶಿಕ್ಷಣ ನೀಡುವ ಉದ್ದೇಶದಿಂದ ಎಜ್ಯುಕೇನಲ್ ಟ್ರಸ್ಟ್ ಆರಂಭಿಸಲಾದ ಈ ಟ್ರಸ್ಟ್ ಉತ್ತಮ ಪ್ರಗತಿ ಸಾಧಿಸುವಂತಾಗಲಿ ಎಂದು ಉಪ್ಪುಂದ ಕುಂದ ಅಧ್ಯಯನ ಕೇಂದ್ರ ಅಧ್ಯಕ್ಷ ಯು. ಚಂದ್ರಶೇಖರ್ ಹೊಳ್ಳ ಹೇಳಿದರು.

ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಪ್ಪುಂದ ಎಜ್ಯುಕೇಶನಲ್ ಸರ್ವೀಸ್ ಟ್ರಸ್ಟ್ ಇದರ ಉದ್ಘಾಟನಾ ಸಮಾರಂಭ ಹಾಗೂ ನೂತನ ವಿದ್ಯಾಂಗ ಉಪನಿರ್ದೇಶಕರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿ ಕನ್ನಡ ಶಾಲೆಗಳಿಲ್ಲಿ ಮಕ್ಕಳ ಕೊರತೆ ಕಂಡುಬರುತ್ತಿದೆ. ಆಂಗ್ಲ ಭಾಷೆಯ ವ್ಯಾಮೋಹದಿಂದ ಕನ್ನಡ ಮಾಧ್ಯಮ ಶಾಲೆಗೆ ಬರಲಿ ಮಕ್ಕಳು ಕೇಳುತ್ತಿಲ್ಲ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷೆಗೆ ಎಷ್ಟು ಮಹತ್ವಾ ನೀಡುತ್ತೇವೆ ಅಷ್ಟೇ ಮಹತ್ವವನ್ನು ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳಿಗೆ ಒತ್ತು ನೀಡಬೇಕು. ನಾವು ಇದ್ದಾಗೆ ಇದ್ದರೆ ಬದಲಾಗುವುದು ಸಾಧ್ಯವಿಲ್ಲ. ನಾವು ಬದಲಾವಣೆಯನ್ನು ನೋಡಿದಾಗ ನಮಗೂ ಒಳ್ಳೆಯ ಹೆಸರು ಹಾಗೂ ಊರಿಗೊಂದು ಗೌರವ ದೊರೆಯುತ್ತದೆ. ನಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರ ಬಗ್ಗೆ ಅರಿವು ಮೂಡಿಸಬೇಕು, ವಿದ್ಯಾಭ್ಯಾಸದ ಜೊತೆಗೆ ನಮ್ಮ ಆಧುನಿಕದ ಬಗ್ಗೆ ಮನವರಿಕೆ ಮಾಡಬೇಕಾಗಿದೆ ಎಂದರು.

ಸಮಾರಂಭ ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಹಾಗೂ ಕ.ರಾ.ರ.ಸಾ ಸಂಸ್ಥೆಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ವಹಿಸಿ ಮಾತನಾಡಿ ಆಂಗ್ಲ ಮಾಧ್ಯಮದ ವ್ಯಾಮೋಹದಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರಲು ಮುಂದಾಗುತ್ತಿಲ್ಲ. ಸರ್ಕಾರಿ ಶಾಲೆಗಳಲ್ಲಿ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಊರಿಗೆ ಒಂದು ಸರ್ಕಾರಿ ಶಾಲೆ ಮಾತ್ರ, ಆ ಶಾಲೆಯಲ್ಲಿ ಒಂದು ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಹೊಂದಿದ್ದಾರೆ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಬೇಕು ಎಂದರು.

ಉಪ್ಪುಂದ ಎಜ್ಯುಕೇಶನಲ್ ಸರ್ವೀಸ್ ಟ್ರಸ್ಟ್ ಇದರ ಲಾಂಭನವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಬಿಡುಗಡೆ ಮಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾಂಗ ಉಪನಿರ್ದೇಶಕ ಶೇಷಶಯನ ಕಾರಿಂಜ, ಕರ್ನಾಟಕ ಬ್ಯಾಂಕಿನ ನಿವೃತ್ತ ಅಧಿಕಾರಿ ಶಿವಾನಂದ ಮಯ್ಯ, ಕೊಲ್ಲೂರು ಮೂಕಾಂಬಿಕಾ ದೇವಳದ ಆಡಳಿತ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯರಾದ ಸುರೇಶ್ ಬಟವಾಡಿ, ಗೌರಿ ದೇವಾಡಿಗ, ತಾ.ಪಂ.ಸದಸ್ಯೆ ಪ್ರಮೀಳಾ ದೇವಾಡಿಗ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಓ.ಆರ್.ಪ್ರಕಾಶ್, ಉಪ್ಪುಂದ ಕರ್ನಾಟಕ ಬ್ಯಾಂಕಿನ ನಿವೃತ್ತ ಅಧಿಕಾರಿ ಶಿವಾನಂದ ಮಯ್ಯ, ಶಿರೂರು ಜೇಸಿಐ ನಿಕಟಪೂರ್ವಾಧ್ಯಕ್ಷ ಪ್ರಸಾದ ಪ್ರಭು, ಶಾಲೆಯ ಮುಖ್ಯೊಪಾಧ್ಯಾಯ ಮಹಾಬಲ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಾರಾಮ್ ಭಟ್, ಉಪ್ಪುಂದ ಎಜ್ಯುಕೇಶನಲ್ ಟ್ರಸ್ಟ್ ರಿ ಅಧ್ಯಕ್ಷ ಗಣೇಶ್ ಉಪ್ಪುಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಗೂ ವಿದ್ಯಾರ್ಥಿಗಳ ಪೋಷಕರು, ಜನಪ್ರತಿನಿಧಿಗಳು ಹಾಗೂ ಹಳೆವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕರು, ಅಧ್ಯಾಪಕರ ವೃಂದದವರು ಹಾಜರಿದ್ದರು. ನಿವೃತ್ತ ಶಿಕ್ಷಕ ಗೋಪಾಲ ಶೆಟ್ಟಿ ಸ್ವಾಗತಿಸಿದರು, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಾಜಾರಾಮ ಪಡಿಯಾರ್ ಪ್ರಾಸ್ತಾವಿಕ ಮಾತಾನಾಡಿದರು, ಎನ್,ಕೆ. ಬಿಲ್ಲವ ಹಾಗೂ ರೇವತಿ ಕಾರ್ಯಕ್ರಮ ನಿರೂಪಿಸಿದರು, ನಿವೃತ್ತ ಶಿಕ್ಷಕಿ ಶಾರದಾ ವಂದಿಸಿದರು.

 

Exit mobile version