Site icon Kundapra.com ಕುಂದಾಪ್ರ ಡಾಟ್ ಕಾಂ

ಸಿದ್ಧಾಪುರ ಜಿ.ಪಂ ಕ್ಷೇತ್ರದ ಸದಸ್ಯ ಹಾಲಾಡಿ ತಾರನಾಥ ಶೆಟ್ಟಿ ಇನ್ನಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಸಿದ್ಧಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಹಾಲಾಡಿ ತಾರಾನಾಥ ಶೆಟ್ಟಿ (೫೬) ಅನಾರೋಗ್ಯದಿಂದ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ತಾರಣ್ಣ ಅಂತಲೇ ಜನಜನಿತರಾಗಿದ್ದರು. ಹಾಲಾಡಿ ಶ್ರೀ ಮರ್ಲಚಿಕ್ಕು ದೇವಸ್ಥಾನದ ಧರ್ಮದರ್ಶಿಯಾಗಿದ್ದರು, ಹಾಲಾಡಿ ಯಕ್ಷಗಾನ ಮೇಳದ ಸಂಚಾಲಕರಾಗಿದ್ದರು. ಕಳೆದ ಭಾರಿ ನಡೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಿದ್ಧಾಪುರ ಕ್ಷೇತ್ರದಿಂದ ಗೆದ್ದು ಬಂದಿದ್ದರು. ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದು ಅವರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಅವಿವಾಹಿತರಾಗಿದ್ದ ಅವರು ಕುಟುಂಬಿಕರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

 

Exit mobile version