Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರಿನಲ್ಲಿ ಮುಖ್ಯಮಂತ್ರಿಗಳಿಂದ 490 ಕೋಟಿ ರೂ. ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ 430ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ ಖಾದರ್, ಯುವಜನ ಕ್ರೀಡಾ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಮೆಸ್ಕಾಂ ನಿರ್ದೇಶಕ ಸಂಪಿಗೇಡಿ ಸಂಜೀವ ಶೆಟ್ಟಿ, ಮೀನುಗಾರ ಮುಖಂಡ ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ ಸೇರಿದಂತೆ ಇನ್ನತರ ಗಣ್ಯರು ವೇದಿಕೆಯಲ್ಲಿದ್ದರು.

ಶಾಸಕ ಕೆ. ಗೋಪಾಲ ಪೂಜಾರಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಕೆ. ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

Exit mobile version