Kundapra.com ಕುಂದಾಪ್ರ ಡಾಟ್ ಕಾಂ

ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಕನ್ನಡ ಚರ್ಚಾ ಸ್ಪರ್ಧೆ: ವೈಷ್ಣವಿ ಗೋಪಾಲ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮೈಸೂರಿನ ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ ಗೋಪಾಲ ಅವರು ದ್ವಿತೀಯ ಸ್ಥಾನ ಗಳಿಸಿ ಬೆಂಗಳೂರಿನ ಬಸವನಗುಡಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಗಂಗೊಳ್ಳಿಯ ಗೋಪಾಲ ಚಂದನ್ ಮತ್ತು ಡಾ.ವೀಣಾ ಕಾರಂತ್ ದಂಪತಿಯ ಪುತ್ರಿ.

 

Exit mobile version