ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೂಕ್ಷ್ಮ, ಪ್ರಾವೀಣ್ಯ ಮತ್ತು ಪ್ರಬುದ್ಧತೆಯಿಂದ ಯುವಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ, ಅವರ ವರ್ತನೆಗಳಲ್ಲಿ ಅಡಕವಾಗಿರುವ ವಿಷಯಗಳ ಅತ್ಯಂತ ಕಾಳಜಿಯಿಂದ ಗ್ರಹಿಸಿ, ಸಂವೇದನಾಶೀಲರಾಗಿ ಪರಿಹರಿಸುವ ಅನಿವಾರ್ಯತೆ ಇದೆಎಂದು ಡಾ.ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆಮನೋವೈದ್ಯಡಾ. ವಿರೂಪಾಕ್ಷ ದೇವರಮನೆ ಹೇಳಿದರು.
ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜ್ ಅಧ್ಯಾಪಕರ ಸಂಘದ ಆಶ್ರಯದಲ್ಲಿ ಕಾಲೇಜ್ ವೇದಿಕೆಯಲ್ಲಿ ಇತ್ತೀಚೆಗೆ ನಡೆದ ಯುವ ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಸಂವಾದದಲ್ಲಿ ಮಾತನಾಡಿದರು.
ಕಾಲೇಜ್ ಪ್ರಾಂಶುಪಾಲಪ್ರೊ.ದೋಮ ಚಂದ್ರಶೇಖರ್, ಉಪಪ್ರಾಂಶುಪಾಲ ಚೇತನ್ ಕುಮಾರ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ಜ್ಯೋತಿ ಮೊಗವೀರಸ್ವಾಗತಿಸಿದರು.ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಸುಧಾಕರ್ ಪಾರಂಪಳ್ಳಿ ಅತಿಥಿಗಳ ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಮುಖ್ಯಸ್ಥ ರಾಜೇಶ್ ಶೆಟ್ಟಿನಿರೂಪಿಸಿ, ವಂದಿಸಿದರು. ಉಡುಪಿ ಬಾಳಿಗಾ ಆಸ್ಪತ್ರೆ ಮನೋವೈದ್ಯ ಡಾ.ಡಾ. ವಿರೂಪಾಕ್ಷ ದೇವರಮನೆ ಸಂವಾದ ಕಾರ‍್ಯಕ್ರಮದಲ್ಲಿ ಮಾತನಾಡಿದರು.