Kundapra.com ಕುಂದಾಪ್ರ ಡಾಟ್ ಕಾಂ

ಅಂತರರಾಷ್ಟ್ರೀಯ ಯೋಗೋತ್ಸವ ಸ್ಪರ್ಧೆಯಲ್ಲಿ ಕಂಚು ಗೆದ್ದ ಕುಶ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರಿನ ಎಸ್‌ಜಿಎಸ್ ಇಂಟರ್‌ನ್ಯಾಶನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ಸಂಶೋಧನಾ ಕೇಂದ್ರವು ಮಲೇಷ್ಯಾದ ಕೌಲಾಲಂಪುರ್‌ನಲ್ಲಿ ಆಯೋಜಿಸಿದ್ದ ೬ನೇ ಅಂತರರಾಷ್ಟ್ರೀಯ ಯೋಗೋತ್ಸವ ಸ್ಪರ್ಧೆಯಲ್ಲಿ ಭಾರತದ ತಂಡವನ್ನು ಪ್ರತಿನಿಧಿಸಿದ್ದ ಮರವಂತೆಯ ಯೋಗಪಟು ಕುಶ ಪೂಜಾರಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಬಾಲ್ಯದಿಂದಲೇ ಯೋಗ ತರಬೇತಿ ಪಡೆದು ಶಾಲೆ, ಕಾಲೇಜುಗಳಲ್ಲಿ ಕಲಿಯುತ್ತಿರುವಾಗ ನಡೆದ ಹಲವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಶಸ್ತಿಗಳನ್ನು ಪಡೆದ ಸಾಧನೆ ಕುಶ ಅವರದು. ಬಿ. ಕಾಂ ಪದವಿ ಮುಗಿಸಿರುವ ಅವರು ಪ್ರಸಕ್ತ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಯೋಗವಿಜ್ಞಾನದಲ್ಲಿ ಎಂ.ಎಸ್ಸಿ ಪದವಿ ಅಧ್ಯಯನ ನಡೆಸುತ್ತಿದ್ದಾರೆ.  ಕುಶ ಪೂಜಾರಿ ಮರವಂತೆ ಗುಳದಾಳಿಬೆಟ್ಟು ರಾಮಚಂದ್ರ ಪೂಜಾರಿ, ಲೀಲಾವತಿ ಪೂಜಾರಿ ದಂಪತಿಯ

Also read: ► ಅಂತರರಾಷ್ಟ್ರೀಯ ಯೋಗೋತ್ಸವ ಸ್ಪರ್ಧೆಗೆ ಕುಶ ಪೂಜಾರಿ – http://kundapraa.com/?p=27277

 

Exit mobile version