Site icon Kundapra.com ಕುಂದಾಪ್ರ ಡಾಟ್ ಕಾಂ

ಮೇ 4: ಮುಖ್ಯಮಂತ್ರಿ ಕುಂದಾಪುರ ತಾಲೂಕಿನ ಸಿದ್ದಾಪುರಕ್ಕೆ

ಕುಂದಾಪುರ: ಬಹುನಿರೀಕ್ಷಿತ ವಾರಾಹಿ ನೀರಾವರಿ ಯೋಜನೆಯನ್ನು ಮೇ 4ರಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧಾಪುರ ಪ್ರೌಢಶಾಲಾ ಆವರಣದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ.

ಬಳಿಕ ಅವರು ಸರಕಾರದ ನಾನಾ ಸವಲತ್ತುಗಳನ್ನು ವಿತರಿಸಲಿದ್ದಾರೆ. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು, ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌, ಉಸ್ತುವಾರಿ ಸಚಿವ ವಿನಯ ಕುಮಾರ ಸೊರಕೆ, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಸುನೀಲ್‌ ಕುಮಾರ್‌, ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸವಿತಾ ಶಿವಾನಂದ ಕೋಟ್ಯಾನ್‌, ಶಿವಮೊಗ್ಗ ಸಂಸದ ಬಿ.ಎಸ್‌. ಯಡಿಯೂರಪ್ಪ, ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಶಾಸಕ ಪ್ರಮೋದ್‌ ಮದ್ವರಾಜ್‌, ವಿಧಾನಪರಿಷತ್‌ ಸದಸ್ಯ ಕೆ. ಪ್ರತಾಪಶ್ಚಂದ್ರ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ತಾ.ಪಂ. ಅಧ್ಯಕ್ಷ ಭಾಸ್ಕರ್‌ ಬಿಲ್ಲವ, ಸಿದ್ಧಾಪುರ ಗ್ರಾ.ಪಂ. ಅಧ್ಯಕ್ಷ ಯು. ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿರುವರು ಎಂದು ಶಾಸಕರ ಕಚೇರಿ ಪ್ರಕಟನೆ ತಿಳಿಸಿದೆ.

Exit mobile version