ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಸೈಂಟ್ ಮೇರಿಸ್ ಸಿರಿಯನ್ ಕಾಲೇಜು ಬ್ರಹ್ಮಾವರ ಮತ್ತು ಯು ಚಾನೆಲ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಬ್ರಹ್ಮಾವರದಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬಸ್ರೂರು ಶ್ರೀ ಶಾರದಾ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರುತಿ ಬಿ. ಗಂಗೊಳ್ಳಿ ಅತ್ಯುತ್ತಮ ನಿರೂಪಕಿಯಾಗಿ ಆಯ್ಕೆಯಾಗಿ ಪ್ರಥಮ ಪ್ರಶಸ್ತಿ ಪಡೆದುಕೊಂಡಿದ್ದಾಳೆ. ಈಕೆ ಗಂಗೊಳ್ಳಿಯ ಗೀತಾ ಮತ್ತು ಬಿ.ಗಣೇಶ ಖಾರ್ವಿ ದಂಪತಿ ಪುತ್ರಿ.