Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: 505 ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಇವರ ಆಶ್ರಯದಲ್ಲಿ 505 ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಜರಗಿತು.

ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್, ಹಿಂಜಾವೇ ಜಿಲ್ಲಾ ಸಹಸಂಚಾಲಕ ವಾಸುದೇವ ದೇವಾಡಿಗ, ರಾಘವೇಂದ್ರ ಗಾಣಿಗ, ರತ್ನಾಕರ ಗಾಣಿಗ, ಎನ್.ನರೇಶ ಕಿಣಿ, ಯಶವಂತ ಖಾರ್ವಿ, ಹಿಂಜಾವೇ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಸೇರಿದಂತೆ ನೂರಾರು ಮಂದಿ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

 

Exit mobile version