Site icon Kundapra.com ಕುಂದಾಪ್ರ ಡಾಟ್ ಕಾಂ

ಆಳ್ವಾಸ್‍: ರಾಜ್ಯಮಟ್ಟದ ಬಾಲ್‍ಬ್ಯಾಡ್ಮಿಂಟನ್ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ
ಮೂಡುಬಿದಿರೆ: ಹಾಸನದಲ್ಲಿ ನಡೆದ ರಾಜ್ಯ ಮಟ್ಟದ ಆಹ್ವಾನಿತ ಪುರುಷರ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೂಡುಬಿದಿರೆ ಆಳ್ವಾಸ್ ತಂಡ ಪ್ರಶಸ್ತಿ ಗೆದ್ದುಕೊಂಡಿದೆ.
ಹಾಸನ ಫ್ರೆಂಡ್ಸ್ ಹಾಗೂ ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಶನ್ ಸಹಯೋಗದೊಂದಿಗೆ ನಡೆದ ಟೂರ್ನಿಯ ಅಂತಿಮ ಪಂದ್ಯದಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್ ಕ್ಲಬ್ ತಂಡವನ್ನು ನೇರ ಸೆಟ್‍ಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿತು. ಸೂಪರ್ ಲೀಗ್‍ನ ಉಳಿದ ಪಂದ್ಯಗಳಲ್ಲಿ ಆಳ್ವಾಸ್ ಆತಿಥೇಯ ಹಾಸನ ಫ್ರೆಂಡ್ಸ್ ಹಾಗೂ ಕೋಲಾರ ತಂಡಗಳನ್ನು ಸೋಲಿಸಿತು. ಆಳ್ವಾಸ್‍ನ ಕಿರಣ್ ಕುಮಾರ್ ಟೂರ್ನಿಯ ಉತ್ತಮ ಆಟಗಾರ ಪ್ರಶಸ್ತಿ ಪಡೆದುಕೊಂಡರು.

 

Exit mobile version