Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಬೈಂದೂರು-ಬ್ರಹ್ಮಾವರ ವಲಯ ಮಟ್ಟದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಪಂದ್ಯಾಟ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಕ್ರೀಡೆ ನಮ್ಮ ಜೀವನದ ಅವಿಭಾಜ್ಯ ಅಂಗ. ನಮ್ಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆ ಹೆಚ್ಚು ಸಹಕಾರಿಯಾಗಿದೆ. ದೇಶಿಯ ಕ್ರೀಡೆಗಳಿಗೆ ಹೆಚ್ಚು ಮಹತ್ವವನ್ನು ನೀಡುವ ಮೂಲಕ ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸಲು ಸಂಘಟನೆಗಳು ಮುಂದಾಗಬೇಕು. ದೇಶಿಯ ಕ್ರೀಡೆಗಳಲ್ಲಿ ಪಾಲ್ಗೊಳ್ಳುವಂತೆ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗರಾಜ್ ಪೂಜಾರಿ ಹೇಳಿದರು.

ಗಂಗೊಳ್ಳಿಯ ಕರಾವಳಿ ವಾರಿಯರ‍್ಸ್ ಆಶ್ರಯದಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಗಂಗೊಳ್ಳಿ ಕೆಎಫ್‌ಡಿಸಿ ವಠಾರದಲ್ಲಿ ಆಯೋಜಿಸಲಾಗಿದ್ದ ಬೈಂದೂರು-ಬ್ರಹ್ಮಾವರ ವಲಯ ಮಟ್ಟದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ತಾಪಂ ಮಾಜಿ ಸದಸ್ಯ ಸುಧಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ಮತ್ಸ್ಯೋದ್ಯಮಿ ಹರೀಶಕುಮಾರ್, ಸಂತೋಷ ಶೆಟ್ಟಿ ಹೇರಿಕುದ್ರು, ಸತೀಶ ದೇವಾಡಿಗ ಹೆಮ್ಮಾಡಿ, ಸಂಘದ ಅಧ್ಯಕ್ಷ ಗಣೇಶ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರಿತೇಶ ಖಾರ್ವಿ ಹಾಗೂ ಮೂವರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ವಿತರಿಸಲಾಯಿತು.
ಸುಂದರ ಜಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

 

Exit mobile version