ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಗಂಗೊಳ್ಳಿ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ, ತ್ರಾಸಿ ಹೊಸಪೇಟೆ ನಿವಾಸಿ ರಿತೇಶ ಖಾರ್ವಿ ಅವರಿಗೆ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನವನ್ನು ವಿತರಿಸಲಾಯಿತು.
ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ ಅವರು ಸಹಾಯಧನದ ಚೆಕ್‌ನ್ನು ರಿತೇಶ ಖಾರ್ವಿ ಅವರಿಗೆ ಹಸ್ತಾಂತರಿಸಿದರು. ಮಾಜಿ ಅಧ್ಯಕ್ಷ ಡಿ.ಚಂದ್ರ ಖಾರ್ವಿ, ಉಪಾಧ್ಯಕ್ಷ ಗುರುನಾಥ ಪಟೇಲ್, ಕಾರ್ಯದರ್ಶಿ ಎಸ್.ದೇವದಾಸ ಖಾರ್ವಿ, ಚೌಕಿ ವಿಠಲ ಖಾರ್ವಿ, ನಾಗ ಖಾರ್ವಿ, ದಿನೇಶ ಖಾರ್ವಿ, ನಾಗಪ್ಪಯ್ಯ ಪಟೇಲ್ ಮತ್ತಿತರರು ಉಪಸ್ಥಿತಿದ್ದರು.