ಕುಂದಾಪ್ರ ಡಾಟ್ ಕಾಂ ಸುದ್ದಿ
ಕೋಟ: ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದಲ್ಲಿ ಮೇ.2 ರಿಂದ 8 ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಚಪ್ಪರ ಮುಹೂರ್ತ ಜರಗಿತು.
ಈ ಪ್ರಯುಕ್ತ ವಿವಿಧ ದಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಆನಂತಪದ್ಮನಾಭ ಐತಾಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ, ಧ್ವಜ ಪ್ರತಿಷ್ಠಾಪನೆ, ದುರ್ಗಾಪರಮೇಶ್ವರೀ ಬಿಂಬ ಪ್ರತಿಷ್ಠೆ, ಬ್ರಹ್ಮರಥೋತ್ಸವ ಕಾರ್ಯಕ್ರಮ ಸುಗಮವಾಗಿ ಸಾಗಲಿ ಎಂದು ಪುರೋಹಿತ ವೇ|ಮೂ| ಚಂದ್ರಶೇಖರ ಅಡಿಗ ಪ್ರಾರ್ಥನೆ ಸಲ್ಲಿಸಿದರು. ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಕಾರ್ಯದರ್ಶಿ ರಾಮಕೃಷ್ಣ ಐತಾಳ, ಸಾಲಿಗ್ರಾಮ ಘಟಕದ ಅಧ್ಯಕ್ಷ ಕೆ.ತಾರನಾಥ ಹೊಳ್ಳ, ಚಂದ್ರಶೇಖರ್ ಉಪಾಧ್ಯ, ಚಂದ್ರಶೇಖರ ಹೊಳ್ಳ, ಸದಾರಮ ಹೇರ್ಳೆ, ಶಿವರಾಮ ಉಡುಪ ಮುಂತಾದವರು ಉಪಸ್ಥಿತರಿದ್ದರು.

