ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿರುವ ಬಿ.ಎಂ ಸುಕುಮಾರ ಶೆಟ್ಟಿ ಅವರು ಬೈಂದೂರು ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ ಸದಸ್ಯ ಶಂಕರ ಪೂಜಾರಿ, ಟಿ.ಬಿ ಶೆಟ್ಟಿ, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಮೊದಲಾದವರು ಉಪಸ್ಥಿತರಿದ್ದರು. ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದರು.