Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬೈಪಾಸ್ ಬಳಿ ಬಸ್ ಪಲ್ಟಿ: 15 ಮಂದಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೆಳಗಾವಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಭಾರತಿ ಎಂಬ ಹೆಸರಿನ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಬೈಂದೂರು ಬೈಪಾಸ್ ಬಳಿಯ ರಾ.ಹೆ 66ರಲ್ಲಿ ಪಲ್ಟಿಯಾಗಿದ್ದು ಬಸ್ಸಿನಲ್ಲಿದ್ದ ಸುಮಾರು 15 ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಕಡೆಯಿಂದ ಬರುತ್ತಿದ್ದ ಬಸ್ಸು ಬೈಂದೂರು ಬೈಪಾಸ್ ಬಳಿ ಡಿವೈಡರ್ ಕಾಮಗಾರಿಗೆ ಹಾಕಲಾಗಿದ್ದ ಪ್ರತಿಬಂಧಕವನ್ನು ದಾಟುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ಮಗುಚಿದೆ. ಬಸ್ಸಿನ ಗಾಜುಗಳು ಸಂಪೂರ್ಣ ಪುಡಿಯಾಗಿದ್ದ, ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 30 ಪ್ರಯಾಣಿಕರಿದ್ದರು ಎನ್ನಲಾಗಿದೆ. ಸ್ಥಳೀಯರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.

ಬೈಂದೂರು ಪೋಲಿಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Exit mobile version