Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಇಂದು ಬೈಂದೂರಿನ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಶ್ರೀನಿವಾಸ್ ಅವರು ನಾಮಪತ್ರ ಸ್ವೀಕರಿಸಿದರು.

ನಾಮಪತ್ರ ಸಲ್ಲಿಸಿ ಮಾತನಾಡಿದ ಕೆ. ಗೋಪಾಲ ಪೂಜಾರಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಸಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಎಲ್ಲಾ ವರ್ಗದ ಜನರಿಗೂ ರಾಜ್ಯ ಸರಕಾರ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮಗಳನ್ನು ಮೆಚ್ಚಿ ಜನರು ಮತ್ತೆ ತನ್ನನ್ನು ಬೆಂಬಲಿಸಲಿದ್ದಾರೆಂಬ ವಿಶ್ವಾಸವಿದೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ರಾಜು ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಎಸ್.ಮದನ್‌ಕುಮಾರ್ ಉಪ್ಪುಂದ ಉಪಸ್ಥಿತರಿದ್ದರು.

 

Exit mobile version