ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆ ಮತದಾರರನ್ನು ಭೇಟಿಯಾಗಿ ಮತಯಾಚನೆ ನಡೆಸಿದರು.
ಶಿರೂರು ಪೇಟೆ ತೊಪ್ಲು, ಬುಕಾರಿ ಕಾಲೋನಿ, ಕಳಿಹಿತ್ಲು, ಮೋಯಿದ್ದೀನ್‌ಪುರ, ಮೇಲ್ಪಂಕ್ತಿ ಮೊದಲಾದೆಡೆ ಅವರು ಮತದಾರರನ್ನು ಭೇಟಿಯಾದರು. ಈ ಸಂದರ್ಭ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ತಬ್ರೇಜ್, ಶಿರೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರವಿ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.