Site icon Kundapra.com ಕುಂದಾಪ್ರ ಡಾಟ್ ಕಾಂ

ಶುಭದಾ ಆಂಗ್ಲ ಮಾಧ್ಯಮ ಶಾಲೆಯ ನೂತನ ಮುಖ್ಯೋಪಾಧ್ಯಾಯರಾಗಿ ರವಿದಾಸ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಶುಭದಾ ಆಂಗ್ಲ ಮಾಧ್ಯಮ ಶಾಲೆಯ ನೂತನ ಮುಖ್ಯೋಪಾಧ್ಯಾಯರಾಗಿ ರವಿದಾಸ ಶೆಟ್ಟಿ ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ. ಎನ್.ಕೆ.ಬಿಲ್ಲವ ರವರು ನೂತನ ಮುಖ್ಯೋಪಾಧ್ಯಾಯರನ್ನು ಸ್ವಾಗತಿಸಿಕೊಂಡು ಮಾತನಾಡಿ ಸಂಸ್ಥೆಯನ್ನು ಸರ್ವಾಂಗೀಣ ಪ್ರಗತಿಯತ್ತ ಕೊಂಡೊಯ್ಯಲು ಮುಖ್ಯೋಪಾಧ್ಯಾಯರು ಸಮರ್ಥರಿದ್ದಾರೆ ಎಂದರು. ಸಂಸ್ಥೆಯ ನಿರ್ದೇಶಕರಾದ ಕೆ.ಪುಂಡಲೀಕ ನಾಯಕ್ , ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಉದಯ ಪೂಜಾರಿ, ರಾಜೀವ ಶೆಟ್ಟಿ, ಸತೀಶ ಪೂಜಾರಿ ಹಾಗೂ ಸಂಚಾಲಕರಾದ ಶಂಕರ ಪೂಜಾರಿ ಉಪಸ್ಥಿತರಿದ್ದರು. ಸಂಯೋಜಕಿ ಗೀತಾದೇವಿ ಅಡಿಗ ಅವರು ಸ್ವಾಗತಿಸಿ ವಂದನಾರ್ಪಣೆ ಸಲ್ಲಿಸಿದರು.

 

Exit mobile version