Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 37 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪೈಕಿ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ ವಿದ್ಯಾರ್ಥಿನಿ ರುತು ಎಂ.ಗುತ್ತೇದಾರ್ (603) ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಪ್ರಥ್ವಿಶ್ರೀ (592), ವಿನಾಯಕ್ ನಾಯಕ್ (575), ರೋಶಿನಿ ಪೂಜಾರಿ (566), ಜಿ.ಶಶಾಂಕ್ (558), ನಾಗಶ್ರೀ (553), ಸುಹಾಸ್ (545), ಅಕ್ಷೀತಾ (541), ಹರೀಶ ನಾಯಕ್ (539), ಶ್ರೀನಿಧಿ (538), ಸಂಜನಾ (535), ಶ್ರುತಿ (530) ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.

ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಬಾರಿಗೆ ಕೊಂಕಣಿ ತೃತೀಯ ಭಾಷೆಯಲ್ಲಿ ಪರೀಕ್ಷೆ ಬರೆದ ಎಲ್ಲಾ 13 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ.

ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಎಲ್ಲಾ ವಿದ್ಯಾರ್ಥಿಗಳನ್ನು ಹಾಗೂ ಶೇ.100 ಫಲಿತಾಂಶ ದಾಖಲಿಸಲು ಕಾರಣರಾದ ವಿದ್ಯಾರ್ಥಿಗಳನ್ನು ಹಾಗೂ ಅಧ್ಯಾಪಕರನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಅಭಿನಂದಿಸಿದ್ದಾರೆ.

 

Exit mobile version