Kundapra.com ಕುಂದಾಪ್ರ ಡಾಟ್ ಕಾಂ

ವಿಧಾನಸಭಾ ಚುನಾವಣೆ: ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಯತ್ತ ಅಧಿಕಾರಿಗಳ ಪಯಣ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾಚ್ 12ರಂದು ನಡೆಯಲಿರುವ ಚುನಾವಣೆಗೆ ಸಿದ್ಧರಾಗಿರುವ ಅಧಿಕಾರಿಗಳು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಸ್ಟರಿಂಗ್ ಬಳಿಕ ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ತೆರಳಿದರು.

ಕುಂದಾಪುರ ಚುನಾವಣೆ ಅಧಿಕಾರಿ ಟಿ. ಭೂಬಾಲನ್ ನೇತೃತ್ದಲ್ಲಿ ಕುಂದಾಪುರ ಕ್ಷೇತ್ರದ ಮಸ್ಟರಿಂಗ್ ಆರ್.ಎನ್.ಶೆಟ್ಟಿ ಹಾಲ್ನಲ್ಲಿ ನಡೆದರೆ, ಬೈಂದೂರು ಚುನಾವಣೆ ಅಧಿಕಾರಿ ಶ್ರೀನಿವಾಸ ಅವರ ನೇತೃತ್ವದಲ್ಲಿ ಬೈಂದೂರು ಕ್ಷೇತ್ರದ ಮಸ್ಟರಿಂಗ್ ಕಾಲೇಜಿನ ಮಹಡಿ ಹಾಲ್ನಲ್ಲಿ ನಡೆಯಿತು. ಅಧಿಕಾರಿ ಹಾಗೂ ಸಿಬ್ಬಂದಿಗಳು ಮತಯಂತ್ರ ಸಹಿತ ಮತಕೇಂದ್ರಕ್ಕೆ ತೆರಳಿದರು.

ಉಡುಪಿ ಎಸ್ಪಿ ಲಕ್ಷ್ಮಣ ನಿಂಬರ್ಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಂದಾಪುರ ಡಿವೈಎಸ್ಪಿ ಬಿ. ಪಿ ದಿನೇಶ್ ಕುಮಾರ್ ನಿರ್ದೇಶನದಲ್ಲಿ ವೃತ್ತ ನಿರೀಕ್ಷಕ ಮಂಜಪ್ಪ, ಕುಂದಾಪುರ ಠಾಣಾಧಿಕಾರಿ ಹರೀಶ್ ನಾಯಕ್ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.

Exit mobile version