Kundapra.com ಕುಂದಾಪ್ರ ಡಾಟ್ ಕಾಂ

ಧರ್ಮಶ್ರೀ ರಿಲೀಫ್ ಫೌಂಡೇಶ್‌ನಿಂದ ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಧರ್ಮಶ್ರೀ ಪೌಂಡೇಶನ್ ಕೆರ್ಗಾಲು ಇವರ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೈನಾಡಿ ಕಾಲ್ತೋಡು ಇಲ್ಲಿನ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಧರ್ಮಶ್ರೀ ಪೌಂಡೇಶನ್ ಉಪಾಧ್ಯಕ್ಷರಾದ ರಾಮ ಪೂಜಾರಿ, ಪೌಂಡೇಶನ್ ಕಾರ್ಯದರ್ಶಿ ಗಣೇಶ, ಸದಸ್ಯರಾದ ವಿಶ್ವನಾಥ್ ಪೂಜಾರಿ, ರಾಜೇಶ್ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ದಿನೇಶ್, ಸಹ ಶಿಕ್ಷಕರಾದ ಸಂತೋಷ, ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ನೇತ್ರ ಗೌಡ, ಶಾಲಾಭಿಮಾನಿ ರಾಘು ಬಿಲ್ಲವ ಪೈನಾಡಿ ಈ ಸಂದರ್ಭದಲ್ಲಿ ಹಾಜರಿದ್ದರು.

 

Exit mobile version