Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ :ಡಾ.ಬಿ.ಆರ್.ಅಂಬೇಡ್ಕರ್‌ಯುವಕ ಮಂಡಲ ಮೇಲ್‌ಗಂಗೊಳ್ಳಿ ಇದರ 21ನೇ ವಾರ್ಷಿಕೋತ್ಸವ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಡಾ.ಬಿ.ಆರ್.ಅಂಬೇಡ್ಕರ್‌ಯುವಕ ಮಂಡಲ ಮೇಲ್‌ಗಂಗೊಳ್ಳಿ ಇದರ 21ನೇ ವಾರ್ಷಿಕೋತ್ಸವ , ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್‌ಗಂಗೊಳ್ಳಿ ಇವರ 25ನೇ ವಾರ್ಷಿಕೋತ್ಸವ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರ 127ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಗಂಗೊಳ್ಳಿಯ ಮೇಲ್‌ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲಾ ವಠಾರದಲ್ಲಿ ಜರಗಿತು.

ತ್ರಾಸಿ ಯುವಕ ಮಂಡಲದ ಅಧ್ಯಕ್ಷ ಮಿಥುನ್ ಎಂ.ಡಿ.ಬಿಜೂರು ಧ್ವಜಾರೋಹಣ ನೆರವೇರಿಸಿದರು. ಗಂಗೊಳ್ಳಿ ಪತ್ರಕರ್ತ ಗಣೇಶ ಪಿ. ಛದ್ಮವೇಷ ಸ್ಪರ್ಧೆಯನ್ನು ಉದ್ಘಾಟಿಸಿದರು. ಸಂಜೆ ಜರಗಿದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ ವಹಿಸಿದ್ದರು. ಕುಂದಾಪುರದ ವಕೀಲೆ ಅಂಜಲಿ ಹುಂಡೇಕರ್, ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸಂಸ್ಥೆಯ ಸಿಇಒ ಶಿವಾನಂದ ಪೂಜಾರಿ ಶುಭ ಹಾರೈಸಿದರು. ರಾಜೇಶ ತ್ರಾಸಿ ಬಹುಮಾನ ವಿತರಿಸಿದರು.

ಇದೇ ಸಂದರ್ಭ ವ್ಯಂಗ್ಯ ಚಿತ್ರಕಾರ ಜಿ.ಭಾಸ್ಕರ ಕಲೈಕಾರ್, ಸಾಹಿತ್ಯ ರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಾ, ಉರಗ ಸಾಧಕ ಗುರುರಾಜ್ ಗಂಗೊಳ್ಳಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಯುವತಿ ಮಂಡಲದ ಸ್ಥಾಪಕ ಅಧ್ಯಕ್ಷೆ ಅಕ್ಕಮ್ಮ ಮತ್ತು ಮಹಿಳಾ ಮಂಡಲದ ಸ್ಥಾಪಕ ಅಧ್ಯಕ್ಷೆ ಬೇಬಿ ಅವರನ್ನು ಗೌರವಿಸಲಾಯಿತು. ಡಾ.ಅಂಬೇಡ್ಕರ್‌ರವರ ೧೨೭ನೇ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹಧನವನ್ನು ವಿತರಿಸಲಾಯಿತು.

 

Exit mobile version