Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಇಲ್ಲಿಯ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿ.ಎಸ್.ವಿ.ಎಸ್ ಅಸೋಷಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ವಿದ್ಯಾರ್ಥಿ ಜೀವನ ಎನ್ನುವುದು ಮನುಷ್ಯನ ವ್ಯಕ್ತಿತ್ವ ರೂಪಿಸುವಲ್ಲಿ ಬಹಳ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಶಿಸ್ತು ಸಂಯಮ ಗೌರವ ಛಲ ಇತ್ಯಾದಿಗಳ ಮೂಲಕ ನಾವು ಗುರಿಯನ್ನು ತಲುಪಲು ನಿರಂತರ ಪರಿಶ್ರಮ ಪಟ್ಟರೆ ಗೆಲುವು ನಮ್ಮದಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸರಸ್ವತಿ ವಿದ್ಯಾಲಯ ಕಾಲೇಜಿನ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ಕಾರ‍್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಉಪನ್ಯಾಸಕ ಭಾಸ್ಕರ್ ಶೆಟ್ಟಿ ವಿದ್ಯಾಲಯ ಬಳಗವನ್ನು ಪರಿಚಯಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಶಿಸ್ತು ಪಾಲನೆ ನೀತಿ ನಿಯಮಗಳ ಬಗೆಗೆ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ದೊರೆಯುವ ವಿವಿಧ ಸೌಲಭ್ಯಗಳ ಬಗೆಗೆ ಉಪನ್ಯಾಸಕರಾದ ಸುಜಯೀಂದ್ರ ಹಂದೆ. ಪ್ರವೀಣ್ ಕಾಮತ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಕಛೇರಿ ಪ್ರಬಂಧಕ ಭಾಸ್ಕರ್ ಎಚ್ ಜಿ ವಿವರಿಸಿದರು.ಇದೇ ಸಂದರ್ಭದಲ್ಲಿ ಈ ಬಾರಿಯ ದ್ವಿತೀಯ ಪಿಯುಸಿಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಶದ ವಿದ್ಯಾರ್ಥಿಗಳನ್ನು ಅಭಿನಂಧಿಸಲಾಯಿತು.

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲ ಬಾಷಾ ಉಪನ್ಯಾಸಕ ಥಾಮಸ್ ಪಿ ಪ್ರಾಸ್ತಾವಿಸಿದರು. ಸುಗುಣ ಆರ್ ಸ್ವಾಗತಿಸಿದರು ಎನ್ ಸಿ ವೆಂಕಟೇಶ ಮೂರ್ತಿ ಕಾರ‍್ಯಕ್ರಮ ನಿರೂಪಿಸಿದರು. ನಾರಾಯಣ್ ನಾಯ್ಕ್ ವಂದಿಸಿದರು.

 

Exit mobile version