Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಾಥಾ ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮ ಜರಗಿತು.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಂಗೊಳ್ಳಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಪ್ರಮುಖ ಬೀದಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಜಾಥಾ ನಡೆಸಿದರು. ಬಳಿಕ ಗಂಗೊಳ್ಳಿಯ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಪಿಡಿಒ ಬಿ.ಮಾಧವ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ತ್ಯಾಜ್ಯಗಳನ್ನು ಬೇಕಾಬಿಟ್ಟಿ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ ಮತ್ತು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಪ್ರಯೋಗಾಲಯ ಎಟೆಂಡರ್ ವಿಜಯಕುಮಾರ್, ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ಸಹಶಿಕ್ಷಕಿ ಶಾಂತಿ ಕ್ರಾಸ್ತಾ, ರೇಶ್ಮಾ ಖಾರ್ವಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ನಡೆಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ನಾರಾಯಣ ಶ್ಯಾನುಭಾಗ್, ಸಂದೀಪ ಖಾರ್ವಿ, ಶೇಖರ ಜಿ., ಉದಯಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

 

Exit mobile version