Kundapra.com ಕುಂದಾಪ್ರ ಡಾಟ್ ಕಾಂ

ಆಳ್ವಾಸ್ ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಚಿತ್ರಕಲಾ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಮೂಡುಬಿದಿರೆ: ಆಳ್ವಾಸ್ ಪ್ರೌಢಶಾಲೆಯಲ್ಲಿ `ಪ್ಲಾಸ್ಟಿಕ್ ಮುಕ್ತ ಪರಿಸರ’ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಪರಿಸರ ನಮ್ಮ ಬದುಕಿಗೆ ಬೇಕಾದ ಎಲ್ಲವನ್ನೂ ಕೊಟ್ಟಿದೆ. ಆದರೆ ಪರಿಸರದ ಕೊಡುಗೆಯನ್ನು ನಾವು ಹಾಳು ಮಾಡುತ್ತಿದ್ದೇವೆ. ಪರಿಸರಕ್ಕೆ ನಾವೇನು ಕೊಟ್ಟಿದ್ದೇವೆ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಪರಿಸರ ಜಾಗೃತಿ ಎಳವೆಯ ಹಂತದಲ್ಲಿ ಮನೆಯಲ್ಲಿಯೇ ಮೂಡಬೇಕು. ಮತ್ತು ಅದು ನಿತ್ಯದ ದಿನಚರಿಯಾಗಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಕಾಶ್ ಶೆಟ್ಟಿ ಮಾತನಾಡಿ ನಮ್ಮ ಆರ್ಥಿಕ ಸಮತೋಲನ ಕಾಯ್ದುಕೊಳ್ಳಲು ನಾವು ಪರಿಸರವನ್ನು ನಾಶಮಾಡುತಿದ್ದೇವೆ. ಪರಿಸರವನ್ನು ನಿರ್ಮಾಣ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಇರುವ ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಪರಿಸರಕ್ಕೆ ಹಾನಿ ಮಾಡದಿರುವುದೇ ಪರಿಸರಕ್ಕೆ ನಾವು ನೀಡುವ ದೊಡ್ಡ ಕೊಡುಗೆಯಾಗಿದೆ ಎಂದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರಶಾಂತ್, ಸಹನಾ ಹೆಗ್ಡೆ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರುಗಳಾದ ಶ್ರೀನಿಧಿ ಯಳಚಿತ್ತಾಯ, ಸಹ ಆಡಳಿತಾಧಿಕಾರಿ ಚೈತ್ರ ಉಪಸ್ಥಿತರಿದ್ದರು.

ಪ್ರಶಾಂತ್ ಸ್ವಾಗತಿಸಿದರು. ಪತ್ರಕರ್ತ ಬಿ.ಸೀತಾರಾಮ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀನಿಧಿ ಯಳಚಿತ್ತಾಯ ವಂದಿಸಿದರು. ಕನ್ನಡ ಅದ್ಯಾಪಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು. ಚಿತ್ರಕಲಾ ಶಿಕ್ಷಕ ಭಾಸ್ಕರ ನೆಲ್ಯಾಡಿ ಸ್ಪರ್ಧೆಯನ್ನು ಸಂಘಟಿಸಿದರು.

 

 

Exit mobile version