Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಉಚಿತ ಪುಸ್ತಕ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಗಂಗೊಳ್ಳಿಯ ಲೈಟ್‌ಹೌಸ್‌ನ ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್ ಮತ್ತು ತೌಹೀದ್ ಎಜ್ಯುಕೇಶನಲ್ ಟ್ರಸ್ಟ್ ಇವರ ಸಹಯೋಗದಲ್ಲಿ ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ 15ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಸಂಘದ ಅಧ್ಯಕ್ಷ ಮಡಿ ನಾಗರಾಜ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ವೈ.ಶ್ರೀನಿವಾಸ ಖಾರ್ವಿ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ಶಾಲೆ ತೊರೆಯಬಾರದು ಎಂಬ ಉದ್ದೇಶದಿಂದ ಹಾಗೂ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕಳೆದ 15 ವರ್ಷಗಳಿಂದ ಪ್ರತಿವರ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತಿತರ ಅಗತ್ಯ ಸಲಕರಣೆಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಂಡು ಸತ್ಪ್ರಜೆಗಳಾಗಬೇಕು ಎಂದು ಹೇಳಿದರು.

ಗಂಗೊಳ್ಳಿ ತೌಹೀದ್ ಎಜ್ಯುಕೇಶನಲ್ ಟ್ರಸ್ಟ್‌ನ ಜಕ್ರಿಯಾ ಚಂದಾವರ ಮತ್ತು ಲೈಟ್ ಹೌಸ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಬಿ.ನಾಗರಾಜ ಖಾರ್ವಿ ಕೊಲ್ಲೂರು ಶುಭ ಹಾರೈಸಿದರು. ಲೈಟ್‌ಹೌಸ್ ಶ್ರೀ ರಾಮ ಅಂಗನವಾಡಿ ಕೇಂದ್ರದ ಶಿಕ್ಷಕಿ ಶೋಭಾ ಕೇಶವ ಶೇರುಗಾರ್ ಉಪಸ್ಥಿತರಿದ್ದರು. ಲೈಟ್‌ಹೌಸ್ ಪರಿಸರದ ವಿದ್ಯಾರ್ಥಿಗಳಿಗೆ ಸುಮಾರು 20 ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ವಿತರಿಸಲಾಯಿತು.

ನಾಗರಾಜ ಖಾರ್ವಿ ಸ್ವಾಗತಿಸಿದರು. ವಿಶ್ವನಾಥ ಮೊಗವೀರ ಕಾರ್ಯಕ್ರಮ ನಿರೂಪಿಸಿದರು. ವೆಂಕಟೇಶ ಕೋಟ್ಯಾನ್ ವಂದಿಸಿದರು.

 

Exit mobile version