Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ನೂತನ ಶಾಸಕ ಡಿ.ವೇದವ್ಯಾಸ ಕಾಮತ್ ಭೇಟಿ

?

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ನೂತನವಾಗಿ ಆಯ್ಕೆಯಾದ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದರು.

ಶಾಸಕರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ವೇದವ್ಯಾಸ ಕಾಮತ್ ಅವರನ್ನು ದೇವಳದ ಆಡಳಿತ ಮಂಡಳಿ ಸದಸ್ಯರು ಸ್ವಾಗತಿಸಿದರು. ಶ್ರೀದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸೇವೆ ಸಲ್ಲಿಸಿದ ಅವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು. ಚುನಾವಣೆ ನಾಮಪತ್ರ ಸಲ್ಲಿಕೆ ಸಂದರ್ಭ ಕುಟುಂಬದ ಸದಸ್ಯರು ಶ್ರೀದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಹೀಗಾಗಿ ಚುನಾವಣೆಯಲ್ಲಿ ಗೆದ್ದು ಶಾಸಕನಾಗಿ ಆಯ್ಕೆಯಾಗಿದ್ದು ಶ್ರೀದೇವರ ಆಶೀರ್ವಾದ ಪಡೆಯಲೆಂದು ದೇವಳಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.

ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್ ಹಾಗೂ ಎಚ್.ಗಣೇಶ ಕಾಮತ್ ಅವರು ಶಾಸಕ ಡಿ.ವೇದವ್ಯಾಸ ಕಾಮತ್ ಅವರನ್ನು ದೇವಳದ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ಆಡಳಿತ ಮಂಡಳಿ ಸದಸ್ಯರಾದ ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ಜಿ.ವೆಂಕಟೇಶ ನಾಯಕ್, ಕೆ.ಗೋಪಾಲಕೃಷ್ಣ ನಾಯಕ್, ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ, ಡಿ.ವಾಮನ ಕಾಮತ್, ಜಿ.ಭಾಸ್ಕರ ವಿಠಲ ಶೆಣೈ, ಜಿ.ವೆಂಕಟೇಶ ಶೆಣೈ, ಜಿ.ವಿಠಲ ಶೆಣೈ, ಜಿ.ವಿಜಯ ಶೆಣೈ, ವೈಭವಿ ವಿ.ಶೆಣೈ, ವೃಂದಾ ವಿ.ಕಾಮತ್, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಎನ್.ರವೀಂದ್ರ ನಾಯಕ್, ಎನ್.ಗಜಾನನ ನಾಯಕ್, ಕೆ.ಶಾಂತಾರಾಮ ನಾಯಕ್, ಜಿ.ವಿಶ್ವನಾಥ ಆಚಾರ್ಯ, ಕೆ.ಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.

 

Exit mobile version