Kundapra.com ಕುಂದಾಪ್ರ ಡಾಟ್ ಕಾಂ

ಸರಸ್ವತಿ ವಿದ್ಯಾಲಯದಲ್ಲಿ ‘ದೃಷ್ಟಿ’ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಗಂಗೊಳ್ಳಿಯ ರೋಟರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇದರ ವಾರ್ಷಿಕ ಸಂಚಿಕೆ ‘ದೃಷ್ಟಿ’ ಯನ್ನು ಬಿಡುಗಡೆಗೊಳಿಸಲಾಯಿತು..

ಈ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಿಶ್ವನಾಥ ಕರಬರವರು ವಿದ್ಯಾರ್ಥಿಗಳ ರುಚಿ ಅಭಿರುಚಿಯ ಕೈಗನ್ನಡಿಯಂತೆ ಪ್ರತಿಭಾ ಪ್ರದರ್ಶನಗಳ ಪ್ರತ್ಯಕ್ಷ ಸಾಕ್ಷಿಯಂತೆ ರೂಪುಗೊಳ್ಳುವ ಕಾಲೇಜಿನ ವಾರ್ಷಿಕ ಸಂಚಿಕೆಗಳು ಸಾಹಿತ್ಯವನ್ನು ಬೆಳೆಸುವಲ್ಲಿ ಉತ್ತಮ ಕೊಡುಗೆಯನ್ನು ನೀಡುತ್ತವೆ. ಜೀವನದಲ್ಲಿನ ಸಮಸ್ಯೆಗಳನ್ನು ಎದುರಿಸುವಂತಹ ಮನೋಬಲವನ್ನು ಸಾಹಿತ್ಯ ಪ್ರೀತಿ ಬೆಳೆಸುತ್ತದೆ ಎಂದು ಅಭಿಪ್ರಾಯಪಟ್ಟರು.

ಅಂತರ್ಜಾಲ ವ್ಯಸನದಿಂದಾಗಿ ನಾವು ನಮ್ಮಲ್ಲಿರುವ ಅಂತರ್ಜಲವನ್ನು ಕಂಡುಕೊಳ್ಳುವಲ್ಲಿ ಹಿಂದೆ ಬೀಳುತ್ತಿದ್ದೇವೆ. ಯಶಸ್ಸು ದಕ್ಕಬೇಕಾದರೆ ಉತ್ತಮ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಬೇಕು. ಸಾಹಿತ್ಯದ ಅಭಿರುಚಿ ಅದಕ್ಕೆ ನೆರವಾಗುತ್ತದೆ ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಸಂಚಿಕೆಯ ಪ್ರಧಾನ ಸಂಪಾದಕರಾದ ಎಚ್. ಸುಜಯೀಂದ್ರ ಹಂದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂಧರ್ಭದಲ್ಲಿ ಸಂಪಾದಕ ಮಂಡಳಿಯ ಥಾಮಸ್ ಪಿ.ಎ, ಶಾಲೆಟ್ ಲೋಬೊ, ನರೇಂದ್ರ ಎಸ್ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ರಮ್ಯಾ ಸ್ವಾಗತಿಸಿದರು. ರಕ್ಷಾ ಮತ್ತು ಅಂಜಲಿ ಕಾರ‍್ಯಕ್ರಮ ನಿರೂಪಿಸಿದರು. ಚಂದನಾ ವಂದಿಸಿದರು.

 

Exit mobile version