ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೊಟೇಶ್ವರದ ಶ್ರೀ ಕಾಳವಾರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಸುಬ್ರಹ್ಮಣ್ಯ ಎ. ಅವರು ಮಂಡಿಸಿದ ಅಧ್ಯಯನ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ಡಿ ಪದವಿ ನೀಡಿದೆ.
ಸುಬ್ರಹ್ಮಣ್ಯ ಅವರು ‘ಖಜಾನೆ ಹೊಣೆಗಾರಿಕೆ ಮತ್ತು ಆಯವ್ಯಯ ನಿರ್ವಹಣೆ ಮಸೂದೆ – 2003 ನಂತರದಲ್ಲಿ ಕೇಂದ್ರ ಸರಕಾರದ ಖಜಾನೆ ನೀತಿ ಪರಿಪಾಲನೆ: ಒಂದು ಸಮಗ್ರ ಅಧ್ಯಯನ’ ಎಂಬ ವಿಷಯದ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ ಅರಬಿ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು.
ಸುಬ್ರಹ್ಮಣ್ಯ ಅವರು ಬೈಂದೂರು ಪಡುವರಿಯ ಅಪ್ಪಯ್ಯನ ಮನೆ ದಿ. ವೆಂಕಟರಮಣ ಹಾಗೂ ಲಕ್ಷ್ಮೀ ಅವರ ಪುತ್ರ.