Kundapra.com ಕುಂದಾಪ್ರ ಡಾಟ್ ಕಾಂ

ನಿವೃತ್ತಿ ಸಂಸ್ಕೃತ ಉಪನ್ಯಾಸಕ ಡಾ. ಎಚ್. ವಿ. ನರಸಿಂಹಮೂರ್ತಿ ಇನ್ನಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ, ಕುಂದೇಶ್ವರ ದೇವಸ್ಥಾನದ ಮಾಜಿ ಧರ್ಮದರ್ಶಿ ಡಾ. ಎಚ್. ವಿ. ನರಸಿಂಹಮೂರ್ತಿ ಅವರು ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಬಹುಭಾಷಾ ವಿದ್ವಾಂಸ, ನಿಗರ್ವಿ, ಸದಾ ನಗುಮೊಗದ ಡಾ. ಎಚ್.ವಿ.ನರಸಿಂಹ ಮೂರ್ತಿಕನ್ನಡ ಮತ್ತು ಸಂಸ್ಕೃತ ಭಾಷೆಯಲ್ಲಿ ೭೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವರ ನೂರಾರು ಲೇಖನಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಕುಂದಾಪುರದ ಕುಂದೇಶ್ವರ ದೇವಸ್ಥಾನದ ಅಭಿವೃದ್ಧಿಯಲ್ಲಿ ಡಾ. ಎಚ್. ವಿ. ನರಸಿಂಹಮೂರ್ತಿ ಅವರ ಕೊಡುಗೆ ಗಣನೀಯವಾದದ್ದು. ಶೃಂಗೇರಿ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಕುಂದಾಪುರದ ಹತ್ತಾರು ಸಂಸ್ಥೆಗಳಲ್ಲಿ ಡಾ. ಮೂರ್ತಿ ಸಕ್ರಿಯರಾಗಿದ್ದರು.

ಚಿಕ್ಕಮಗಳೂರು ಜಿಲ್ಲೆಯ ತೋಟದೂರು ಗ್ರಾಮದ ಮಾವಿನಕುಡಿಯವರಾದ ಡಾ. ಎಚ್. ವಿ. ನರಸಿಂಹಮೂರ್ತಿ ಅವರು ಭಂಡಾರ್ಕರ್ಸ್ ಕಾಲೇಜಿನಲ್ಲಿ ಉಪನ್ಯಾಸ ವೃತ್ತಿ ಆರಂಭಿಸಿದ ಬಳಿಕ ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು.

Exit mobile version