Kundapra.com ಕುಂದಾಪ್ರ ಡಾಟ್ ಕಾಂ

ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮೂಲಕ ಹಲವು ಕ್ರೀಡಾ ಪ್ರತಿಭೆಗಳು ಬೆಳಕಿಗೆ: ಆರೂರು ತಿಮ್ಮಪ್ಪ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪೈಕಿ ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು ಕಬ್ಬಡ್ಡಿ ಪಂದ್ಯಾಟಗಳು ಪ್ರತಿ ವರ್ಷ ನಡೆಯುತ್ತಿದ್ದು, ಉತ್ತಮ ಕ್ರೀಡಾಪಟುಗಳು ಈ ಭಾಗದಲ್ಲಿದ್ದಾರೆ. ಕಬ್ಬಡ್ಡಿ ಅಸೋಸಿಯೆಷನ್ ಮೂಲಕ ಅಂತಹ ಪ್ರತಿಭೆಗಳನ್ನು ಬೆಳಕಿಗೆ ತರುವ ಪ್ರಯತ್ನವಾಗಬೇಕಿದೆ ಎಂದು ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಆರೂರು ತಿಮ್ಮಪ್ಪ ಶೆಟ್ಟಿ ಹೇಳಿದರು.

ಅವರು ಬೈಂದೂರು ಶಾರದಾ ಕನ್ವೆನ್ಷನ್ ಹಾಲ್‌ನಲ್ಲಿ ಬೈಂದೂರು ತಾಲೂಕು ಅಮೇಚ್ಯೂರ್ ಕಬಡ್ಡ ಅಸೋಸಿಯೇಷನ್ ರಚನೆಗೆ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಅಮೇಚೂರ್ ಕಬ್ಬಡ್ಡಿ ಅಸೋಸಿಯೇಷನ್ ಕಾಯೋನ್ಮುಖವಾಗಿದ್ದು, ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ವ್ಯವಸ್ಥಿತವಾಗಿ ಕಬಡ್ಡಿ ಕ್ರೀಡೆ ಆಯೋಜನೆ ಹಾಗೂ ಹೊಸ ಪ್ರತಿಭೆಗಳಿಗೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅವಕಾಶ ದೊರೆಯುವಂತೆ ಮಾಡುವುದೇ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಈ ಸಂದರ್ಭ ಬೈಂದೂರು ತಾಲೂಕು ಅಮೇಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರನ್ನಾಗಿ ಪ್ರಥ್ವಿ ಕ್ರೀಡಾ ಸಂಘದ ಜಯಾನಂದ ಹೋಬಳಿದಾರ್ ಅವರನ್ನು ಸೂಚಿಸಿ ಆಯ್ಕೆಮಾಡಲಾಯಿತು.

ಉಡುಪಿ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಜೇಂದ್ರ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲ ಸಂಘಟನಾ ಕಾರ್ಯದರ್ಶಿ ಮಹೇಶ್, ಸದಸ್ಯ ಕೃಷ್ಣಾನಂದ ಮೊದಲಾದವರು ವೇದಿಕೆಯಲ್ಲಿದ್ದರು.

ಜಯಾನಂದ ಹೋಬಳಿದಾರ್ ಸ್ವಾಗತಿಸಿ, ಶಿಕ್ಷಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.

Exit mobile version